Tuesday, 30 November 2021

ಒಡಿಶಾ, ಆಂಧ್ರ ಕರಾವಳಿಗೆ ಡಿ. 6ರಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ


ಒಡಿಶಾ, ಆಂಧ್ರ ಕರಾವಳಿಗೆ ಡಿ. 6ರಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ

ಹೊಸದಿಲ್ಲಿ: ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿಗೆ ಶನಿವಾರ ಬೆಳಗ್ಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ. ಅಂಡಮಾನ್, ನಿಕೋಬಾರ್‌ಗೆ ಹೊಂದಿಕೊಂಡಿರುವ ದಕ್ಷಿಣ ಥಾಲ್ಯಾಂಡ್ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗಿದೆ. ಮುಂದಿನ 12 ಗಂಟೆಗಳಲ್ಲಿ ಅಂಡಮಾನ್ ಹಾಗೂ ನಿಕೋಬಾರ್ ಪ್ರದೇಶದಲ್ಲಿಯೂ ಕಡಿಮೆ ಒತ್ತಡ ಪ್ರದೇಶ ಉಂಟಾಗಲಿದೆ. ಅಲ್ಲದೆ, ಆಗ್ನೇಯ ಭಾಗದಲ್ಲಿ ವಾಯು ಭಾರ ಕುಸಿತವಾಗಿ ಪರಿವರ್ತನೆಗೊಳ್ಳಲಿದೆ . ಡಿಸೆಂಬರ್ 2ರ ವೇಳೆಗೆ ಪೂರ್ವ-ಮಧ್ಯೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಬಳಿಕ ವಾಯುವ್ಯಕ್ಕೆ ಚಲಿಸಿ ಡಿಸೆಂಬರ್ 4ರ ಬೆಳಗ್ಗೆ ಉತ್ತರ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿಗೆ ಅಪ್ಪಳಿಸಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತದ ಪ್ರಭಾವದಿಂದ ಒಡಿಶಾ ಕರಾವಳಿಯಲ್ಲಿ ಹಾಗೂ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಲಿದೆ. ಪಶ್ಚಿಮಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಆಂಧ್ರಪ್ರದೇಶದ ಉತ್ತರ ಕರಾವಳಿಯಲ್ಲಿ ಕೂಡ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


 


SHARE THIS

Author:

0 التعليقات: