Saturday, 27 November 2021

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೋವಿಡ್ ದೃಢ

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೋವಿಡ್ ದೃಢ

ಬೆಂಗಳೂರು: ದೇವನ ಹಳ್ಳಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಆಫ್ರಿಕಾದಿಂದ ಇಂದು ಬಂದಿಳಿದ ಇಬ್ಬರಲ್ಲಿ ಕೊರೋನ ಸೋಂಕು ದೃಢ ಪಟ್ಟಿದ್ದು, ಹೊರ ದೇಶಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮಾಹಿತಿ ನೀಡಿದ್ದು, ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿದಾಗ ಕೊರೋನ ಸೋಂಕು ತಗುಲಿರುವುದು ಖಚಿತವಾಯಿತು. ತಕ್ಷಣ ಆ ಸ್ಯಾಂಪಲ್ ಅನ್ನು ಲ್ಯಾಬ್​ಗೆ ಕಳುಹಿಸಲಾಯಿತು. ಅವರಿಗೆ ತಗುಲಿರುವುದು ಒಮಿಕ್ರಾನ್ ಅಲ್ಲ, ಅದು ಡೆಲ್ಟಾ ಪ್ಲಸ್ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ರಾಜಧಾನಿಯಲ್ಲಿ ಶನಿವಾರದಂದು 149 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,34,377 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಕಳೆದ ವಾರದಿಂದ ಸರಾಸರಿ 160 ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, ಶುಕ್ರವಾರದಂದು 224 ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಹಾಗಾಗಿ ಕೊರೋನ ಮುಂಜಾಗೃತ ಕ್ರಮಗಳನ್ನು ಪಾಲಿಸುವಂತೆ ಬಿಬಿಎಂಪಿ ಗೌರವ್ ಗುಪ್ತಾ ತಿಳಿಸಿದ್ದಾರೆ.

ನಗರದ ಗಡಿಭಾಗವಾದ ಆನೇಕಲ್ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಅಲ್ಲದೇ ಹೊಸ ಮಾದರಿಯ ಸೋಂಕು ಪ್ರಕರಣದ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪ್ರಮುಖ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ತಂಡಗಳನ್ನು ನಿಯೋಜಿಸಿ ನೆರೆ ರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.SHARE THIS

Author:

0 التعليقات: