ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಇನ್ನಿಲ್ಲ
ಬೆಂಗಳೂರು: ಹಿರಿಯ ವಿದ್ವಾಂಸ ಪ್ರೊ.ಕೆ ಎಸ್ ನಾರಾಯಣಚಾರ್ಯ ವಿಧಿವಶರಾಗಿದ್ದಾರೆ. 88 ವರ್ಷಗಳ ಜೀವನ ಯಾತ್ರೆಯನ್ನು ನಾರಾಯಣಚಾರ್ಯ ಮುಗಿಸಿದ್ದಾರೆ. ವಿದ್ವಾಂಸರು ಹಾಗೂ ಧರ್ಮಶಾಸ್ತ್ರ ಪ್ರಚಾರದ ಮೂಲಕ ಅವರು ಖ್ಯಾತರಾಗಿದ್ದರು.
ನಾರಾಯಣಾಚಾರ್ಯ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಾಪ ಸೂಚಿಸಿದ್ದಾರೆ.
ಪ್ರಖ್ಯಾತ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ ಪ್ರೊ.ಕೆ.ಎಸ್.ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ. ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಅವರು ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
0 التعليقات: