Friday, 26 November 2021

ವಿಧಾನ ಪರಿಷತ್ ಚುನಾವಣೆ: ಸಂಸದೆ ಸುಮಲತಾ ಭೇಟಿ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ

 ವಿಧಾನ ಪರಿಷತ್ ಚುನಾವಣೆ: ಸಂಸದೆ ಸುಮಲತಾ ಭೇಟಿ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದರು.

ಶುಕ್ರವಾರ ನಗರದ ಜೆ.ಪಿ.ನಗರದಲ್ಲಿರುವ ಸುಮಲತಾ ಅಂಬರೀಶ್ ನಿವಾಸಕ್ಕೆ ಆಗಮಿಸಿದ ದಿನೇಶ್ ಗೂಳಿಗೌಡ, ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಮಂಡ್ಯ ಜಿಲ್ಲೆಯಲ್ಲಿ ಸುಮಲತಾಗೆ ಹೆಚ್ಚಿನ ಹಿಡಿತವಿರುವ ಹಿನ್ನೆಲೆಯಲ್ಲಿ, ಅವರ ಬೆಂಬಲ ಸಿಕ್ಕಿದರೆ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಅಭ್ಯರ್ಥಿಯದ್ದು.

ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸುಮಲತಾರನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಬೆಂಬಲ ನೀಡಿದ್ದರು. ಹೀಗಾಗಿ, ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.


SHARE THIS

Author:

0 التعليقات: