Friday, 26 November 2021

ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆ: ರೆಡ್ ಅಲರ್ಟ್


ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆ: ರೆಡ್ ಅಲರ್ಟ್

ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಂಡಮಾರುತ ಸೃಷ್ಟಿಯಾಗಲಿದ್ದು, ಶನಿವಾರದಿಂದ ತಮಿಳುನಾಡು ಹಾಗೂ ಆಂಧ್ರದಲ್ಲಿ ಹೆಚ್ಚಿನ ಮಲೆಯಾಗಲಿದೆ. ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಥೂತುಕುಡಿ, ಕುಡ್ಡಲೋರ್, ವಿಲ್ಲುಪುರಂ, ಚೆಣಗಲ್‌ಪಟ್ಟು, ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್, ಥೇನಿ, ಮಧುರೈ, ಪುದುಕೊಟ್ಟೈ, ಪಾಂಡಿಚೇರಿಯಲ್ಲಿ ನವೆಂಬರ್ 30ರವರೆಗೂ ಮಳೆ ಸುರಿಯಲಿದೆ.

ಇನ್ನು ಆಂಧ್ರಪ್ರದೇಶದಲ್ಲಿ ಯನಮ್ ಹಾಗೂ ರಾಯಲ್‌ಸೀಮನ್‌ನಲ್ಲಿ ಶನಿವಾರ ವಿಪರೀತ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇಂದು ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೆಂಕಾಸಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ತೂತುಕುಡಿ, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಥೇಣಿ, ಮಧುರೈ, ಪುದುಕೊಟ್ಟೈ ಮತ್ತು ಪುದುಚೇರಿಯಲ್ಲೂ ಮಳೆ ಹೆಚ್ಚಾಗಲಿದೆ.

ದಕ್ಷಿಣ ತಮಿಳುನಾಡು ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ತಮಿಳುನಾಡಿನಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ವೈಪರೀತ್ಯದಿಂದಾಗಿ ನಿನ್ನೆ ಚೆನ್ನೈ-ತೂತುಕುಡಿ ವಿಮಾನವನ್ನು ತಿರುಚ್ಚಿಗೆ ತಿರುಗಿಸಲಾಗಿತ್ತು. IMD ಹವಾಮಾನ ಮುನ್ಸೂಚನೆಯ ಪ್ರಕಾರ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲೂ ಮುಂದಿನ ಐದು ದಿನಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನ ರಾಜಧಾನಿ ಚೆನ್ನೈ, ತೂತುಕುಡಿ ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಸತತ ಮಳೆಯ ಹಿನ್ನೆಲೆಯಲ್ಲಿ 25 ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಮಳೆಯ ರೌದ್ರನರ್ತನ ಮುಂದುವರಿದಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನ ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 27 ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಮುಳುಗಡೆಯಾಗಿದ್ದರೆ, ರಸ್ತೆಗಳು ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸೃಷ್ಟಿಸಿವೆ.

ತಮಿಳುನಾಡಿನಲ್ಲಿ ಕಳೆದ ತಿಂಗಳಿನಿಂದ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ತೂತುಕುಡಿ, ಕನ್ಯಾಕುಮಾರಿ, ತಿರುನಲ್ವೇಲಿ, ಕಡಲೂರು, ತಿರುವರೂರು, ತೆಂಕಶಿ ಮತ್ತು ವಿಲ್ಲುಪುರಂ ಸೇರಿದಂತೆ 27 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.

ವಾಯುಭಾರ ಕುಸಿತದ ಪರಿಣಾಮ ರಾಜ್ಯ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ನಾಳೆಯಿಂದ ಮತ್ತೆ ಮೂರು ದಿನ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡು, ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಭಾರತ ಕುಸಿತದಿಂದ ಮತ್ತೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ನಾಳೆಯಿಂದ ಸೋಮವಾರದವರೆಗೂ ರಾಜ್ಯದ ಒಳನಾಡಿನಲ್ಲಿ ಮಳೆಯಾಗಲಿದೆ.

ಆದರೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪಕ ಉಸ್ತುವಾರಿ ಕೇಂದ್ರದ ನಿವೃತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಇಂದು ಮಳೆಯಾಗುವ ಸಾಧ್ಯತೆ ವಿರಳವಾಗಿದೆ ಎಂದು ಹೇಳಿದರು.

ಭಾನುವಾರ ತುಮಕೂರಿನ ಪಾವಗಡ, ಶಿರಾ, ಕಿತ್ತೂರು, ಚಿತ್ರದುರ್ಗ, ಕೊಟ್ಟೂರು, ಹರಪನಹಳ್ಳಿ, ಹಡಗಲಿ, ಹೊಸದುರ್ಗ, ಶಿಕಾರಿಪುರ ಸೇರಿದಂತೆ ರಾಜ್ಯದ ಮಧ್ಯಭಾಗದಲ್ಲಿ ಮಳೆಯಾಗಲಿದೆ. ಸೋಮವಾರ ಹೈದರಾಬಾದ್ ಕರ್ನಾಟಕ ಭಾಗದ ಬಾದಾಮಿ, ಬಾಗಲಕೋಟೆ, ನರಗುಂದ ಸೊಲ್ಲಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ವಿವರಿಸಿದರು.SHARE THIS

Author:

0 التعليقات: