Friday, 5 November 2021

ಸುಳ್ಯ; ಅಡಿಕೆ ಕದ್ದ ಆರೋಪ: ಬಾಲಕನಿಗೆ ಮಾರಣಾಂತಿಕ ಹಲ್ಲೆ


 ಸುಳ್ಯ; ಅಡಿಕೆ ಕದ್ದ ಆರೋಪ: ಬಾಲಕನಿಗೆ ಮಾರಣಾಂತಿಕ ಹಲ್ಲೆ

ಸುಳ್ಯ: ಇಲ್ಲಿನ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ  ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆ ನಡೆಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಗುತ್ತಿಗಾರಿನ 16 ವರ್ಷದ  ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಮಾತ್ರವಲ್ಲದೆ ಹಲ್ಲೆ ನಡೆಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ  ಹರಿಯಬಿಡಲಾಗಿತ್ತು. ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿರುವುದಾಗಿ ತಿಳಿದುಬಂದಿದೆ. ವೀಡಿಯೊ ವೈರಲ್ ಆಗಿ ಪ್ರಕರಣ ದಾಖಲಾಗುತ್ತಿದ್ದಂತೇ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. 


SHARE THIS

Author:

0 التعليقات: