Tuesday, 23 November 2021

ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ


 ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಬಹುತೇಕ ಕಡೆ ಅಕಾಲಿಕ ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 

ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಪ್ರಧಾನಿ ಮೋದಿಯವರು ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ನಮ್ಮ ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಮತ್ತು ಪರಿಹಾರ ಕ್ರಮಗಳ ಬಗ್ಗೆ ವಿವರ ನೀಡಲಾಯಿತು ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಜೀವಹಾನಿ ಮತ್ತು ಬೆಳೆಹಾನಿಯ ಬಗ್ಗೆ ಪ್ರಧಾನಮಂತ್ರಿಗಳು ಕಳಕಳಿ ವ್ಯಕ್ತಪಡಿಸಿ, ರಾಜ್ಯಕ್ಕೆ ಸಾಧ್ಯವಿರುವ ಸಹಕಾರ, ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. 


SHARE THIS

Author:

0 التعليقات: