ನೂತನ ಶಾಸಕ ರಮೇಶ್ ಭೂಸನೂರ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಇತ್ತೀಚೆಗೆ ಸಿಂದಗಿ ವಿಧಾನಸಬೆಗೆ ನಡೆದ ಉಪಚುನಾವಣೆಯಲ್ಲಿ ಚುನಾಯಿತರಾದ ಭೂಸನೂರ ರಮೇಶ್ ಬಾಳಪ್ಪ ಅವರು ಶಾಸಕರಾಗಿ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಮಾಣವಚನ ಬೋಧಿಸಿದರು. ಆದರೆ ಹಾನಗಲ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಶಾಸಕ ಶ್ರೀನಿವಾಸ ಮಾನೆ ಗೈರಾಗಿದ್ದರು.
ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
0 التعليقات: