ರಾತ್ರಿ ಕರ್ಫ್ಯೂ ಹಿಂಪಡೆದ ರಾಜ್ಯ ಸರಕಾರ

ಬೆಂಗಳೂರು : ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ರಾತ್ರಿ ಕರ್ಫ್ಯೂವನ್ನು ರಾಜ್ಯ ಸರಕಾರ ಹಿಂಪಡೆದಿದೆ ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಕುದುರೆ ಓಟದ ಪಂದ್ಯಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಕುದುರೆ ಓಟದ ಪಂದ್ಯಗಳಲ್ಲಿ ಸ್ಥಳಾವಕಾಶದ ಸಾಮರ್ಥ್ಯದಷ್ಟು ಮಾತ್ರ ಕುದುರೆ ಓಟದ ಪೋಷಕರು ಭಾಗವಹಿಸಬೇಕು. ಅಲ್ಲದೆ, ಕೋವಿಡ್ ಲಸಿಕೆಯ ಎರಡು ಡೋಸ್ ಗಳನ್ನು ಪಡೆದವರಿಗಷ್ಟೇ ಅವಕಾಶ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
0 التعليقات: