Saturday, 20 November 2021

ವಿಧಾನ ಪರಿಷತ್ ಚುನಾವಣೆ; ನಾಮಪತ್ರ ಸಲ್ಲಿಸಿದ ಕೋಟಾ ಶ್ರೀನಿವಾಸ ಪೂಜಾರಿ

 ವಿಧಾನ ಪರಿಷತ್ ಚುನಾವಣೆ; ನಾಮಪತ್ರ ಸಲ್ಲಿಸಿದ ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ಶನಿವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಹಾಗೂ ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.SHARE THIS

Author:

0 التعليقات: