ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಕೇಳುತ್ತಿದ್ದಂತೆ 'ಥೂ, ಥೂ' ಎಂದ ರಮೇಶ್ ಜಾರಕಿಹೊಳಿ
ಬೆಂಗಳೂರು: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಕೇಳುತ್ತಿದ್ದಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಥೂ, ಥೂ, ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಪ್ರಸಂಗ ಜರುಗಿತು.
ಮಂಗಳವಾರ ನಗರದಲ್ಲಿ ಪರಿಷತ್ತು ಚುನಾವಣೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಪತ್ರಕರ್ತರೊಬ್ಬರು, ಬೆಳಗಾವಿಯ ಪರಿಷತ್ತು ಚುನಾವಣೆ ಲಕ್ಷ್ಮೀ ಹೆಬ್ಬಾಳ್ಕರ್-ರಮೇಶ್ ಜಾರಕಿಹೊಳಿ ನಡುವೆ ನೇರ ಹಣಾಹಣಿ ಆಗಲಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ 'ಥೂ ಥೂ' ಎಂದು ಗೇಲಿ ಮಾಡಿ, ಹೊರಹೋದರು.
ಇದಕ್ಕೂ ಮುನ್ನ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ನಾಮಪತ್ರ ಸಲ್ಲಿಸಲಿದ್ದೇವೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ. ನಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕಿದೆ ಎಂದರು.
0 التعليقات: