Sunday, 14 November 2021

ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ: ಸಿಎಂ ಬೊಮ್ಮಾಯಿ


ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಟ್ ಕಾಯಿನ್  ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಈ ಪ್ರಕರಣದಲ್ಲಿ ಯಾರನ್ನೂ  ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.  ನಮ್ಮ ಸರ್ಕಾರ ಈ ವಿಚಾರದಲ್ಲಿ ಬಹಳ ಮುಕ್ತವಾಗಿದೆ. ಈ ಪ್ರಕರಣವನ್ನು ಬಯಲಿಗೆಳೆದವರೇ ನಾವು. ತನಿಖೆ ಮಾಡಿದ್ದು, ಇ.ಡಿ. ಮತ್ತು ಸಿಬಿಐಗೆ ಶಿಫಾರಸು ಮಾಡಿದ್ದು ನಮ್ಮ ಸರ್ಕಾರ. ಇ.ಡಿ.ಯಿಂದ ಈ ಬಗ್ಗೆ ತನಿಖೆ ನಡೆಯುತ್ತಿದೆ. ಸಿಬಿಐ  ಇಂಟರ್ ಪೋಲ್ ಗೂ ಸಹ  ವಹಿಸಲಾಗಿದೆ. ಅವರು ಕೋರಿದ ಅಗತ್ಯ ಮಾಹಿತಿಯನ್ನು  ಒದಗಿಸಲಾಗಿದೆ ಎಂದರು.

ಈ ಪ್ರಕರಣದಲ್ಲಿ ರಾಷ್ಟ್ರಕ್ಕೆ, ರಾಜ್ಯಕ್ಕೆ ಹಾಗೂ ವ್ಯಕ್ತಿಗಳಿಗೆ ಮೋಸವಾಗಿದ್ದರೆ, ಮೋಸ ಮಾಡಿದವರ ಮೇಲೆ ಮುಖ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಆರೋಪಿಯನ್ನು ಬಿಟ್ಟುಕೊಟ್ಟವರಿಂದ ನಾವು ಪಾಠ ಕಲಿಯಬೇಕಿಲ್ಲ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೇಳಿರುವ ಆರು ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 2016 ರಿಂದ ಪ್ರಕರಣಕ್ಕೆ ಕರ್ನಾಟಕದೊಂದಿಗೆ ಸಂಬಂಧ ಇರುವುದಾದರೆ ಅವರ ಸರ್ಕಾರ ತನಿಖೆ  ಏಕೆ ಕೈಗೊಳ್ಳಲಿಲ್ಲ.

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳು ಹಾಗೂ ಸಚಿವರು ಯಾಕೆ ಗಮನಹರಿಸಲಿಲ್ಲ. ಆರೋಪಿ ಶ್ರೀ ಕೃಷ್ಣನನ್ನು  ಬಂಧಿಸಿ, ಬಿಟ್ಟು ಕಳುಹಿಸಲಾಯಿತು. ನಿರೀಕ್ಷಣಾ ಜಾಮೀನು ಪಡೆದಾಗಲೂ ವಿಚಾರಣೆಗೆ ಅವಕಾಶವಿತ್ತು. ಮುಕ್ತವಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬಿಟ್ಟು ನಮ್ಮನ್ನು ಎಕೆ ಪ್ರಶ್ನಿಸುತ್ತಿದ್ದಾರೆ ಎಂದು ಕೇಳಿದ ಅವರು, ಆರೋಪಿಯನ್ನು ಬಿಟ್ಟುಕೊಟ್ಟವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಆದ್ದರಿಂದ, ಆಧಾರರಹಿತ ಆರೋಪಗಳನ್ನು ಮಾಡುವ ಬದಲು, ಸಾಕ್ಷ್ಯಾಧಾರಗಳನ್ನು ತನಿಖೆ ಮಾಡುತ್ತಿರುವ ಇ.ಡಿ.ಗೆ ಒದಗಿಸಲಿ ಕೂಡಲೇ ಕ್ರಮ ಎಂದರು.  


SHARE THIS

Author:

0 التعليقات: