Thursday, 11 November 2021

ಬಿಟ್ ಕಾಯಿನ್ ಆರೋಪ ಬಗ್ಗೆ ತಲೆಕೆಡಿಸಿಕೊಳ್ಳದಂತೆ ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಸಲಹೆ


 ಬಿಟ್ ಕಾಯಿನ್ ಆರೋಪ ಬಗ್ಗೆ ತಲೆಕೆಡಿಸಿಕೊಳ್ಳದಂತೆ ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಸಲಹೆ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಬೆಳಿಗ್ಗೆ ದೆಹಲಿಯಲ್ಲಿ  ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ, ಬಿಟ್ ಕಾಯಿನ್ ಬಗ್ಗೆ ತಲೆಕೆಡಿಸಿಕೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಸ್ವತಃ ನಾನೇ  ಬಿಟ್ ಕಾಯಿನ್ ಬಗ್ಗೆ  ಹೇಳೋದಕ್ಕೆ ಪ್ರಯತ್ನ ಮಾಡಿದಾಗ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಜನಪರವಾಗಿ ಕೆಲಸ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಿವಿಮಾತು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 


SHARE THIS

Author:

0 التعليقات: