Wednesday, 10 November 2021

ಹುಲಿ ಹಲ್ಲುಗಳ ಮಾರಾಟ ಜಾಲ ಪತ್ತೆ: ನಾಲ್ವರ ಬಂಧನ


 ಹುಲಿ ಹಲ್ಲುಗಳ ಮಾರಾಟ ಜಾಲ ಪತ್ತೆ: ನಾಲ್ವರ ಬಂಧನ

ಮಡಿಕೇರಿ: ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ವಿರಾಜಪೇಟೆ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ತಿತಿಮತಿ ಪ್ರಾದೇಶಿಕ ವಲಯ ಅರಣ್ಯ ಘಟಕ ಯಶಸ್ವಿಯಾಗಿದೆ.

ಪೊನ್ನಂಪೇಟೆ ತಾಲೂಕಿನ ಸುಳುಗೋಡು ಗ್ರಾಮದ ನಿವಾಸಿ ಗಣೇಶ್ ವೈ.ಸಿ. (20), ಕೋತೂರು ಗ್ರಾಮದ ಸಂತೋಷ್ ಕೆ.ವಿ. (25), ಸುಳುಗೋಡು ಗ್ರಾಮದ ಸಂತೋಷ್ ಕುಮಾರ್ ಎಚ್.ಆರ್ (29) ಹಾಗೂ ಚಿಕ್ಕಮಂಡೂರು ಗ್ರಾಮದ ಪೆಮ್ಮಂಡ ಪವನ್ ಪೂವಯ್ಯ ಬಂಧಿತ ಆರೋಪಿಗಳು. 

 ಗೋಣಿಕೊಪ್ಪದ ಚೆನ್ನಂಗೊಲ್ಲಿ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ತಂಡವೊಂದು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಹುಲಿಯ ಆರು ಹಲ್ಲುಗಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಪೊನ್ನಂಪೇಟೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಐಡಿ, ಪೊಲೀಸ್ ಅರಣ್ಯ ಘಟಕದ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್‌ಚಂದ್ರ, ನಿರ್ದೇಶನದಂತೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅಧೀಕ್ಷಕ ಎಸ್.ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕರಾದ ವೀಣಾ ನಾಯಕ್, ಸಿಬ್ಬಂದಿಯಾದ ಟಿ.ಪಿ.ಮಂಜುನಾಥ್, ದೇವಯ್ಯ.ಕೆ.ಎಸ್., ಬೀನ.ಸಿ.ಬಿ. ಹಾಗೂ ತಿತಿಮತಿ ಉಪ ವಿಭಾಗದ ಎ.ಸಿ.ಎಫ್ ಉತ್ತಯ್ಯ ಪಿ.ಪಿ., ವಲಯ ಅರಣ್ಯಾಧಿಕಾರಿ ಅಶೋಕ್ ಪಿ.ಹುನಗುಂದ, ಉಪವಲಯ ಅರಣ್ಯ ಸಿಬ್ಬಂದಿಯಾದ ಹಾಲೇಶ್ ಎಂ.ಸಿ., ಟಿ.ಜಿ.ಸುರೇಶ್, ಜಿ.ಎಸ್.ರೇವಪ್ಪ, ದರ್ಶನ್ ಎಂ.ಎಂ ಹಾಗೂ ಗಗನ್ ಬಿ.ಎ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


SHARE THIS

Author:

0 التعليقات: