Friday, 10 December 2021

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ: ಯಡಿಯೂರಪ್ಪ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ: ಯಡಿಯೂರಪ್ಪ

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಕ್ಕು ಚಲಾಯಿಸಿದರು. ಶಿಕಾರಿಪುರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗಲಿದೆ ಎಂದು ತಿಳಿಸಿದರು.

ನಮ್ಮಲ್ಲಿ ಮಂತ್ರಿಗಳು, ಶಾಸಕರು ಗೆಲುವಿಗಾಗಿ ಶ್ರಮಿಸಿದ್ದಾರೆ. ಕನಿಷ್ಠ 15 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ವಿಧಾನ ಪರಿಷತ್‌ನಲ್ಲೂ ಬಿಜೆಪಿಗೆ ಬಹುಮತ ಸಿಗಲಿದೆ ಎಂದರು.

ವಿರೋಧ ಪಕ್ಷದ ನಾಯಕರಿಗೆ ಪ್ರತಿಕ್ರಿಯೆ ನೀಡಿಲ್ಲ. ಮುಂದೆಯೂ ಪ್ರತಿಕ್ರಿಯೆ ನೀಡುವುದಿಲ್ಲ. ಫಲಿತಾಂಶವೇ ಅವರಿಗೆ ಉತ್ತರವಾಗಲಿದೆ ಎಂದು ಅವರು ಹೇಳಿದರು.


SHARE THIS

Author:

0 التعليقات: