Thursday, 9 December 2021

ವಿಧಾನ ಪರಿಷತ್ ಚುನಾವಣೆ: 25 ಸ್ಥಾನಗಳಿಗೆ ಇಂದು ಮತದಾನ

ವಿಧಾನ ಪರಿಷತ್ ಚುನಾವಣೆ: 25 ಸ್ಥಾನಗಳಿಗೆ ಇಂದು ಮತದಾನ

ಬೆಂಗಳೂರು :  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಬೆಳಗ್ಗೆ 8ರಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಆಯಾ ಕ್ಷೇತ್ರಗಳ ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಪಟ್ಟಣ ಪಂಚಾಯತ್, ನಗರಸಭೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಮತದಾನದ ಹಕ್ಕನ್ನು ಹೊಂದಿದ್ದಾರೆ.

ಮೇಲ್ಮನೆ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣಾ ಕಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‍ನ ತಲಾ 20 ಅಭ್ಯರ್ಥಿಗಳು ಸೇರಿದಂತೆ ಒಟ್ಟು 90 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, ಚಿಕ್ಕಮಗಳೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗಾಯತ್ರಿ ಶಾಂತೇಗೌಡ ಏಕೈಕ ಮಹಿಳಾ ಅಭ್ಯರ್ಥಿಯಾಗಿದ್ದಾರೆ.

ಮತದಾನ ನಡೆಯುವ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶದ ಮತದಾನ ಕೇಂದ್ರಗಳ ಸುತ್ತಲು 200 ಮೀ. ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಚುನಾವಣೆ ನಡೆಯಲಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.


SHARE THIS

Author:

0 التعليقات: