ರೂ. 36,230 ಕೋಟಿ ವೆಚ್ಚದ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ಶಂಕುಸ್ಥಾಪನೆ
ಶಹಜಹಾನ್ಪುರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.
ಮೀರತ್ನ ಬಿಜೌಲಿ ಗ್ರಾಮದ ಬಳಿ ಪ್ರಾರಂಭವಾಗುವ ಎಕ್ಸ್ಪ್ರೆಸ್ವೇ ಪ್ರಯಾಗ್ರಾಜ್ನ ಜುದಾಪುರ್ ದಂಡು ಗ್ರಾಮದವರೆಗೆ ಇರುತ್ತದೆ.
ಇದು ರಾಜ್ಯದ ಮೀರತ್, ಹಾಪುರ್, ಬುಲಂದ್ಶಹರ್, ಅಮ್ರೋಹಾ, ಸಂಭಾಲ್, ಬುದೌನ್, ಶಹಜಹಾನ್ಪುರ, ಹರ್ದೋಯಿ, ಉನ್ನಾವ್, ರಾಯ್ ಬರೇಲಿ, ಪ್ರತಾಪ್ಗಢ ಮತ್ತು ಪ್ರಯಾಗ್ರಾಜ್ ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ.
ಕಾಮಗಾರಿ ಪೂರ್ಣಗೊಂಡ ನಂತರ ಇದು ಉತ್ತರ ಪ್ರದೇಶದ ಅತಿ ಉದ್ದದ ಎಕ್ಸ್ಪ್ರೆಸ್ವೇ ಆಗಲಿದ್ದು, ರಾಜ್ಯದ ಪಶ್ಚಿಮ ಮತ್ತು ಪೂರ್ವ ಪ್ರದೇಶಗಳನ್ನು ಸಂಪರ್ಕಿಸುತ್ತದೆ.
ಎಂಟು ಲೇನ್ಗಳಿಗೆ ವಿಸ್ತರಿಸಬಹುದಾದ ಆರು ಪಥಗಳ ಎಕ್ಸ್ಪ್ರೆಸ್ವೇಯನ್ನು ರೂ. 36,230 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುವುದು.
0 التعليقات: