Sunday, 12 December 2021

ಕರ್ನಾಟಕದಲ್ಲಿ ಒಮೈಕ್ರಾನ್ 3ನೇ ಪ್ರಕರಣ ಪತ್ತೆ


 ಕರ್ನಾಟಕದಲ್ಲಿ ಒಮೈಕ್ರಾನ್ 3ನೇ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ಪ್ರಭೇದ 'ಒಮೈಕ್ರಾನ್'ನ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಪತ್ತೆಯಾದ 3ನೇ ಪ್ರಕರಣವಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ದಕ್ಷಿಣ ಆಫ್ರಿಕದಿಂದ ರಾಜ್ಯಕ್ಕೆ ಆಗಮಿಸಿರುವ 34 ವರ್ಷದ ಯುವಕನೋರ್ವ ಒಮೈಕ್ರಾನ್ ಗೆ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಆತನಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರು ಹಾಗೂ 15 ಮಂದಿ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದೆ. ಅವರೆಲ್ಲರ ಸ್ಯಾಂಪಲ್ಸ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ದೇಶದಲ್ಲಿ ಒಮೈಕ್ರಾನ್ ನ ಪ್ರಥಮ ಎರಡು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿತ್ತು. ಬಳಿಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಮೈಕ್ರಾನ್ ಪ್ರಕರಣಗಳು ಕಂಡುಬಂದಿವೆ. ರಾಜ್ಯದಲ್ಲಿ ಇದು 3ನೇ ಪಾಸಿಟಿವ್ ಪ್ರಕರಣವಾಗಿದೆ.


SHARE THIS

Author:

0 التعليقات: