Saturday, 18 December 2021

ಒಂದೇ ದಿನ 7,081 ಜನರಲ್ಲಿ ಕೋವಿಡ್ ಪಾಸಿಟಿವ್; ದೇಶದಲ್ಲಿ 83,913 ಕೋವಿಡ್ ಸಕ್ರಿಯ ಪ್ರಕರಣ

ಒಂದೇ ದಿನ 7,081 ಜನರಲ್ಲಿ ಕೋವಿಡ್ ಪಾಸಿಟಿವ್; ದೇಶದಲ್ಲಿ 83,913 ಕೋವಿಡ್ ಸಕ್ರಿಯ ಪ್ರಕರಣ

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಅಟ್ಟಹಾಸ ಆರಂಭವಾಗಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ 7,081 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 264 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 477422 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 83913 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7469 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34178940 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,11,977 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 76,54,466 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,37,46,13,252 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.SHARE THIS

Author:

0 التعليقات: