Friday, 3 December 2021

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ


 ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ: ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ, ಅಂಗಡಿ ಮಾಲಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಮತ್ತು ಮಾರಾಟಗಾರರು, ಪ್ಲಾಸ್ಟಿಕ್ ಚೀಲ, ನಾನ್-ಓವೆನ್ ಚೀಲ, ಪ್ಲಾಸ್ಟಿಕ್ ಭಿತ್ತಿ ಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್ ಮೈಕೋ ಬೀಡ್ಸ್‌ನಿಂದ ತಯಾರಾದಂತಹ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ನಿಷೇಧಿಸಲಾಗಿದೆ.

ಆದುದರಿಂದ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಕಂಡುಬಂದಲ್ಲಿ ದಂಡ ವಿಧಿಸಿ, ನಿಷೇದಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


SHARE THIS

Author:

0 التعليقات: