Thursday, 9 December 2021

ವಾಹನಗಳ ನೋಂದಣಿ: ಸ್ಮಾರ್ಟ್ ಕಾರ್ಡ್ ವಿತರಣೆ ಮುಂದುವರಿಸಲು ಹೈಕೋರ್ಟ್ ಅನುಮತಿ

 ವಾಹನಗಳ ನೋಂದಣಿ: ಸ್ಮಾರ್ಟ್ ಕಾರ್ಡ್ ವಿತರಣೆ ಮುಂದುವರಿಸಲು ಹೈಕೋರ್ಟ್ ಅನುಮತಿ

ಬೆಂಗಳೂರು: ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು(ಆರ್‍ಸಿ) ಈ ಹಿಂದಿನಂತೆಯೇ ಸ್ಮಾರ್ಟ್ ಕಾರ್ಡ್ ಮೂಲಕವೇ ವಿತರಿಸುವಂತೆ ಹೈಕೋರ್ಟ್, ರಾಜ್ಯ ಸರಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

ಸ್ಮಾರ್ಟ್‍ಕಾರ್ಡ್ ಆಧಾರಿತ ನೋಂದಣಿ ಪ್ರಮಾಣ ಪತ್ರಕ್ಕೆ (ಆರ್‍ಸಿ) ಬದಲಾಗಿ ಎಲೆಕ್ಟ್ರಾನಿಕ್ ಅಥವಾ ಆನ್‍ಲೈನ್ ಮೂಲಕ ಆರ್‍ಸಿ ವಿತರಿಸಲು ಕರ್ನಾಟಕ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಪ್ರಶ್ನಿಸಿ ರೂಸ್ಮೆರ್ಟಾ ಟೆಕ್ನಾಲಜೀಸ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಅಲ್ಲದೆ, ಅರ್ಜಿಯಲ್ಲಿನ ಪ್ರತಿವಾದಿಗಳಾದ ಹೆದ್ದಾರಿ ಸಚಿವಾಲಯ, ರಾಜ್ಯ ಸಾರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿ 3 ವಾರಗಳಲ್ಲಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.


SHARE THIS

Author:

0 التعليقات: