ಸಕಲ ಸೇನಾ ಗೌರವದೊಂದಿಗೆ ಜನರಲ್ ಬಿಪಿನ್ ರಾವತ್ ಅಂತ್ಯಕ್ರಿಯೆ
ಹೊಸದಿಲ್ಲಿ: ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟಿರುವ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆಯನ್ನು ದಿಲ್ಲಿಯಲ್ಲಿ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಶುಕ್ರವಾರ ಸಂಜೆ ಸಕಲ ಸೇನಾ ಗೌರವದೊಂದಿಗೆ ನೆರವೇರಿಸಲಾಯಿತು.
ಸರಕಾರಿ ನಾಯಕರು ಮತ್ತು ಮಿಲಿಟರಿ ಅಧಿಕಾರಿಗಳು ಮೌನ ಪ್ರಾರ್ಥನೆಯೊಂದಿಗೆ ಶ್ರದ್ದಾಂಜಲಿ ಸಲ್ಲಿಸಿದರು. ಜನರಲ್ಗೆ 17 ಗನ್ ಸೆಲ್ಯೂಟ್ ನೀಡಲಾಯಿತು.
ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾರಿಗೆ ಪುತ್ರಿ ಅಗ್ನಿ ಸ್ಪರ್ಶ ಮಾಡಿದರು.
0 التعليقات: