Friday, 24 December 2021

ಮೈಸೂರು: ಹಿರಿಯ ಜೆಡಿಎಸ್​ ಮುಖಂಡನ ಪುತ್ರನ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ


 ಮೈಸೂರು: ಹಿರಿಯ ಜೆಡಿಎಸ್​ ಮುಖಂಡನ ಪುತ್ರನ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಮೈಸೂರು: ಜೆಡಿಎಸ್ ಜಿಲ್ಲಾ ಖಜಾಂಚಿ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಆಪ್ತ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಅಪಾಟ್೯ ಮೆಂಟ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮರಟಿ ಕ್ಯಾತನಹಳ್ಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಪ್ರದೀಪ್ (32) ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿ ಮರಟಿ ಖ್ಯಾತನಹಳ್ಳಿಯಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವುದಾಗಿ ತಿಳಿದು ಬಂದಿದೆ.

ಮೃತ ಪ್ರದೀಪ್ ತಾಯಿ ಭಾಗ್ಯ ಶಿವಮೂರ್ತಿ ಈ ಹಿಂದೆ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


SHARE THIS

Author:

0 التعليقات: