Monday, 13 December 2021

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ


 ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ

ಲಕ್ನೊ: ಪ್ರಧಾನಿ ನರೇಂದ್ರ ಮೋದಿ ಅವರು ತಾವು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಎರಡು ಐತಿಹಾಸಿಕ ಹೆಗ್ಗುರುತುಗಳಾದ ಕಾಶಿ ವಿಶ್ವನಾಥ ದೇವಸ್ಥಾನ ಹಾಗೂ  ಗಂಗಾ ಘಾಟ್‌ಗಳನ್ನು ಸಂಪರ್ಕಿಸುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಸೋಮವಾರ ಉದ್ಘಾಟಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಎರಡು ವರ್ಷಗಳ ಅವಧಿಯಲ್ಲಿ ಸುಮಾರು ರೂ. 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಾಶಿ ವಿಶ್ವನಾಥ ಧಾಮದ ಮೊದಲ ಹಂತವನ್ನು ಉದ್ಘಾಟಿಸಿದ್ದಾರೆ.

ಯೋಜನೆಯ ಈ ಹಂತದಲ್ಲಿ 23 ಕಟ್ಟಡಗಳನ್ನು ಉದ್ಘಾಟಿಸಲಾಗುತ್ತದೆ.  ಸುಮಾರು ಐದು ಲಕ್ಷ ಚದರ ಅಡಿಗಳಷ್ಟು ಬೃಹತ್ ಪ್ರದೇಶದಲ್ಲಿ ಇದು ಹರಡಿಕೊಂಡಿದೆ.  ಹಿಂದಿನ ಆವರಣವು 3,000 ಚದರ ಅಡಿಗಳಲ್ಲಿ ಹರಡಿತ್ತು.

ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗ ಕಾರಿಡಾರ್ ಉದ್ಘಾಟನೆಯನ್ನು ಆಡಳಿತಾರೂಢ ಬಿಜೆಪಿ  ತನ್ನ ಪ್ರಮುಖ ಸಾಧನೆಗಳಲ್ಲಿ ಒಂದೆಂದು ಬಿಂಬಿಸುವ ಸಾಧ್ಯತೆಯಿದೆ.


SHARE THIS

Author:

0 التعليقات: