ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ : ಮೂವರು ಸಾವು
ರಾಮನಗರ : ರಾಜ್ಯದಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿದ್ದು, ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಮ್ಮ (55) ಸುಮಿತ್ರ (30), ಹನುಮಂತ ರಾಜ್ (35) ಮೃತಪಟ್ಟಿದ್ದಾರೆ. ಹನುಮಂತ- ಸುಮಿತ್ರ ದಂಪತಿ ಪುತ್ರಿ ಕೀರ್ತನಾ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
0 التعليقات: