Wednesday, 8 December 2021

ವಿದ್ಯುತ್ ಚಾಲಿತ ವಾಹನಗಳ ನೋಂದಣಿಯಲ್ಲಿ ರಾಜ್ಯಕ್ಕೆ ಮೂರನೆಯ ಸ್ಥಾನ


ವಿದ್ಯುತ್ ಚಾಲಿತ ವಾಹನಗಳ ನೋಂದಣಿಯಲ್ಲಿ ರಾಜ್ಯಕ್ಕೆ ಮೂರನೆಯ ಸ್ಥಾನ

ನವದೆಹಲಿ: ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ (ಇ.ವಿ.) ನೋಂದಣಿಯಲ್ಲಿ ಉತ್ತರ ಪ್ರದೇಶ, ದೆಹಲಿ ಮತ್ತು ಕರ್ನಾಟಕ ಮುಂಚೂಣಿ ಸ್ಥಾನಗಳಲ್ಲಿ ಇವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ತಿಳಿಸಿದ್ದಾರೆ.

ದೇಶದಲ್ಲಿ ಇದುವರೆಗೆ ಒಟ್ಟು 8.70 ಲಕ್ಷ ಇ.ವಿ.ಗಳು ನೋಂದಣಿ ಆಗಿವೆ. ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಇ.ವಿ.ಗಳು (2.55 ಲಕ್ಷ) ನೋಂದಣಿ ಆಗಿವೆ ಎಂದು ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ 1.25 ಲಕ್ಷ ಹಾಗೂ ಕರ್ನಾಟಕದಲ್ಲಿ 72 ಸಾವಿರ ಇ.ವಿ.ಗಳು ನೋಂದಣಿ ಆಗಿವೆ. ಬಿಹಾರ ಮತ್ತು ಮಹಾರಾಷ್ಟ್ರ ಕ್ರಮವಾಗಿ ನಾಲ್ಕು ಮತ್ತು ಐದನೆಯ ಸ್ಥಾನಗಳಲ್ಲಿ ಇವೆ.


SHARE THIS

Author:

0 التعليقات: