Wednesday, 8 December 2021

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ: ರಾಜನಾಥ್ ಸಿಂಗ್

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ: 
ರಾಜನಾಥ್ ಸಿಂಗ್

ಹೊಸದಿಲ್ಲಿ: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಹಾಗೂ  ಇತರ 12 ಮಂದಿ ಸಾವನ್ನಪ್ಪಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಗಂಭೀರವಾಗಿದ್ದು ಆದರೆ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ ಹಾಗೂ  ಅವರನ್ನು ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ತಿಗೆ ತಿಳಿಸಿದರು.

ಗ್ರೂಪ್ ಕ್ಯಾಪ್ಟನ್ ಸಿಂಗ್ ತೀವ್ರ ಸುಟ್ಟ ಗಾಯಗಳಿಂದ ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ವರ್ಷ ವಿಮಾನ ಹಾರಾಟ ಸಮಯದಲ್ಲಿ  ಪ್ರಮುಖ ತಾಂತ್ರಿಕ ಸಮಸ್ಯೆಗಳಿಂದ ತನ್ನ ವಿಮಾನವನ್ನು ನಿಭಾಯಿಸುವಲ್ಲಿನ ಧೈರ್ಯಕ್ಕಾಗಿ ವಾಯುಪಡೆಯ ಅಧಿಕಾರಿ ಸಿಂಗ್ ಅವರು  ಆಗಸ್ಟ್‌ನಲ್ಲಿ ಶೌರ್ಯ ಚಕ್ರವನ್ನು ಗೆದ್ದುಕೊಂಡಿದ್ದರು. ವಿಮಾನದ ತುರ್ತು ಪರಿಸ್ಥಿತಿಯ ಹೊರತಾಗಿಯೂ ಅವರು ತಮ್ಮ ತೇಜಸ್ ಯುದ್ಧವಿಮಾನವನ್ನು ಸುರಕ್ಷಿತವಾಗಿ ಇಳಿಸಿದ್ದರು.

ಗ್ರೂಪ್ ಕ್ಯಾಪ್ಟನ್ ಸಿಂಗ್ ಅವರು ಜನರಲ್ ರಾವತ್ ಅವರನ್ನು ಸ್ವಾಗತಿಸಲು ಮತ್ತು ಅವರನ್ನು ವೆಲ್ಲಿಂಗ್ಟನ್‌ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ಕರೆದೊಯ್ಯಲು ಸೂಲೂರಿಗೆ ಹೋಗಿದ್ದರು.


 


SHARE THIS

Author:

0 التعليقات: