Wednesday, 15 December 2021

ಹೆಲಿಕಾಪ್ಟರ್ ಪತನ: ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆಸ್ಪತ್ರೆಯಲ್ಲಿ ನಿಧನ


 ಹೆಲಿಕಾಪ್ಟರ್ ಪತನ: ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆಸ್ಪತ್ರೆಯಲ್ಲಿ ನಿಧನ

ಬೆಂಗಳೂರು: ತಮಿಳುನಾಡಿನಲ್ಲಿ ಕಳೆದ ವಾರ ನಡೆದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಯುಸೇನೆಯ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಿಧನರಾಗಿದ್ದಾರೆ.

ವರುಣ್ ಅವರು ಶೇ.45ರಷ್ಟು ಸುಟ್ಟ ಗಾಯದಿಂದ ಬಳಲುತ್ತಿದ್ದರು. ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್ ಆ್ಯಂಬುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ವರುಣ್ ನಿಧನಕ್ಕೆ ಪ್ರಧಾನಿ ನರೇಂದ್ರ  ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

" ಡಿಸೆಂಬರ್ 8,  2021 ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡು ಇಂದು ಬೆಳಿಗ್ಗೆ ನಿಧನರಾದ ಕೆಚ್ಚೆದೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನದ ವಾರ್ತೆ ತಿಳಿಸಲು ಐಎಎಫ್ ಗೆ ತೀವ್ರ ದುಃಖವಾಗುತ್ತದೆ. ಐಎಎಫ್ ಪ್ರಾಮಾಣಿಕ ಸಂತಾಪವನ್ನು ನೀಡುತ್ತದೆ ಹಾಗೂ  ದುಃಖಿತ ಕುಟುಂಬದೊಂದಿಗೆ ದೃಢವಾಗಿ ನಿಂತಿದೆ" ಎಂದು ಹೇಳಿಕೆಯೊಂದರಲ್ಲಿ ಐಎಎಫ್ ತಿಳಿಸಿದೆ.

ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಹಿತ 13 ಮಂದಿ ಈಗಾಗಲೇ ನಿಧನರಾಗಿದ್ದಾರೆ. ವರುಣ್ ಸಿಂಗ್ ಮಾತ್ರ ದುರಂತದಲ್ಲಿ ಬದುಕುಳಿದು ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದರು.


SHARE THIS

Author:

0 التعليقات: