Tuesday, 14 December 2021

ಭ್ರಷ್ಟಾಚಾರದ ಜನಕ ಅಧಿಕಾರದಿಂದ ಕೆಳಗಿಳಿದಿದ್ದಾರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್


 ಭ್ರಷ್ಟಾಚಾರದ ಜನಕ ಅಧಿಕಾರದಿಂದ ಕೆಳಗಿಳಿದಿದ್ದಾರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಭ್ರಷ್ಟಾಚಾರದ ಜನಕ ಅಧಿಕಾರದಿಂದ ಕೆಳಗೆ ಇಳಿದಿದ್ದು ರಾಜ್ಯದಲ್ಲಿ ಭ್ರಷ್ಟಾಚಾರ ಕಡಿಮೆ ಆಗುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ಉಲ್ಲೇಖಿಸದೆ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೂಪರ್ ಸಿಎಂ ಅಧಿಕಾರದಲ್ಲಿ ಇದ್ದಾಗ ಆಗುತ್ತಿದ್ದ ಭ್ರಷ್ಟಾಚಾರ ಈಗ ಇಲ್ಲ. ಭ್ರಷ್ಟಾಚಾರ ಈಗ ಕಡಿಮೆ ಆಗುತ್ತಿದೆ. ಪ್ರಧಾನಿ ಮೋದಿಯವರಿಗೆ ಗುತ್ತಿಗೆದಾರರು ದೂರು ನೀಡಿದ್ದು, ಈ ಹಿಂದೆ ನಡೆದ ಭ್ರಷ್ಟಾಚಾರದ ಬಗ್ಗೆ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದರು. 

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ ಆಗುತ್ತದೆ ಎಂದು ಹೇಳಿದ್ದೆ. ವಿಧಾನ ಪರಿಷತ್ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದುನೋಡಬೇಕು ಎಂದರು.

ವಂಶಪಾರಂಪರ್ಯ ಬಿಜೆಪಿಯಲ್ಲಿ ನಡೆಯುವುದಿಲ್ಲ. ಕುಟುಂಬದವರೆಲ್ಲಾ ಶಾಸಕರು, ಸಂಸದರು, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಸದಸ್ಯರು ಆಗುತ್ತಿದ್ದಾರೆ ಎಂದು ಯತ್ನಾಳ್ ಇದೇ ವೇಳೆ ಟೀಕಿಸಿದರು.


SHARE THIS

Author:

0 التعليقات: