Friday, 10 December 2021

ಸಿದ್ದರಾಮಯ್ಯರಿಗೆ ಕ್ಷೇತ್ರ ಬಿಟ್ಟು ಕೊಡಲು ನಾನು ಸಿದ್ಧ: ಶಾಸಕ ಪುಟ್ಟರಂಗಶೆಟ್ಟಿ


 ಸಿದ್ದರಾಮಯ್ಯರಿಗೆ ಕ್ಷೇತ್ರ ಬಿಟ್ಟು ಕೊಡಲು ನಾನು ಸಿದ್ಧ: ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಚುನಾವಣೆಗೆ ನಿಲ್ಲಲು ಬಯಸಿದರೆ ಅವರಿಗಾಗಿ ನಾನು ಕ್ಷೇತ್ರವನ್ನು ಸಂತಸದಿಂದ ಬಿಟ್ಟು ಕೊಡುತ್ತೇನೆ ಎಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ  ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಚಾಮರಾಜನಗರದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ನಗರಸಭೆಯ ಮತಗಟ್ಟೆಯಲ್ಲಿ ಮತದಾ ಮಾಡಿದ ಬಳಿಕ ಮಾಧ್ಯಮದವರೊಂದಿಗೆ  ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎಲ್ಲಿಯಾದರು ಚುನಾವಣೆಗೆ ಸ್ವರ್ಧೆ ಮಾಡಿದರೆ ಅವರು ಗೆಲುತ್ತಾರೆ. ಚಾಮರಾಜನಗರದಲ್ಲಿ ಸ್ಪರ್ಧೆ ಮಾಡುವಂತೆ ಅವರನ್ನು ನಾನು ಆಹ್ವಾನಿಸುತ್ತಿದ್ದೇನೆ ಎಂದರು.

ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಬಂದರೆ ನಾನು ಖಂಡಿತವಾಗಿ ಅವರಿಗಾಗಿ ಕ್ಷೇತ್ರವನ್ನು ಬಿಡುತ್ತೇನೆ. ಮುಖ್ಯಮಂತ್ರಿ ಆಗಿದ್ದವರು ಚಾಮರಾಜನಗರದಿಂದ ಸ್ಚರ್ಧೆಮಾಡಿದರೆ ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಲಿದೆ. ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಬರುವುದು ನಮ್ಮ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.

ಧರ್ಮಸೇನಾ ಅವರಿಗೆ ಈ ಬಾರಿ ಟಿಕೇಟ್ ತಪ್ಪಲು ಕಾರಣವೇನು ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಅವರನ್ನೇ ಕೇಳಿ, ಟಿಕೆಟ್ ಸಿಗಲಿಲ್ಲವೆಂದು ಅವರು ಕಾಂಗ್ರೆಸ್ ಬಿಟ್ಟು ಹೋಗಿಲ್ಲ. ಪಕ್ಷದಲ್ಲಿಯೇ ಇದ್ದಾರೆ. ಹೈಕಮಾಂಡ್ ನಿರ್ಧರಿಸಿದ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದರು.


SHARE THIS

Author:

0 التعليقات: