Friday, 3 December 2021

ಗ್ಯಾಸ್ ಟ್ಯಾಂಕರ್ ಢಿಕ್ಕಿ; ಪಂಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು!


ಗ್ಯಾಸ್ ಟ್ಯಾಂಕರ್ ಢಿಕ್ಕಿ; 
ಪಂಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಪಂಚರ್ ಆಗಿ ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಪಂಚರ್ ಆಗಿ ನಿಂತಿದ್ದ ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿಯಾಗಿದೆ.

ಈರುಳ್ಳಿ ಲಾರಿಗೆ ಪಂಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಇವರುಗಳು ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದಿದೆ.



SHARE THIS

Author:

0 التعليقات: