Tuesday, 14 December 2021

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡರಿಗೆ ಗೆಲುವು

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡರಿಗೆ ಗೆಲುವು

ಮಂಡ್ಯ: ಮಂಡ್ಯ ವಿಧಾನ ಪರಿಷತ್ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಕೇವಲ 50 ಮತಗಳನ್ನಷ್ಟೇ ಗಳಿಸಲು ಶಕ್ತರಾಗಿದ್ದಾರೆ.

ದಿನೇಶ್ ಗೂಳಿಗೌಡ 2044 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ಎನ್. ಅಪ್ಪಾಜಿಗೌಡ 1,877 ಮತಗಳನ್ನು ಗಳಿಸಿದರು. ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು 50 ಮತಗಳನ್ನು ಗಳಿಸಿ ತೃತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಡಿ.19ರಂದು ಚುನಾವಣೆಯಲ್ಲಿ ಒಟ್ಟು 4,019 ಮತಗಳು ಚಲಾವಣೆಯಾಗಿದ್ದು, ಈ ಪೈಕಿ 46 ಮತಗಳು ಅಸಿಂಧುಗೊಂಡಿವೆ.


SHARE THIS

Author:

0 التعليقات: