ಬಾಳೆಹೊನ್ನೂರು ಸರಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಮೃತ್ಯು: ವೈದ್ಯರ ನಿರ್ಲಕ್ಷ್ಯದ ಆರೋಪ
ಬಾಳೆಹೊನ್ನೂರು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುಂಬು ಗರ್ಭಿಣಿಯೊಬ್ಬರು ಇಂದು ಬೆಳಗ್ಗೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಆರೋಪಿಸಿ ಮೃತರ ಸಂಬಂಧಿಕರು, ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಆಸ್ಪತ್ರೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಶಿವನಗರ ಶ್ವೇತಾ (27) ಹೆರಿಗೆ ಹೊಟ್ಟೆ ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ವೈದ್ಯರು ಸ್ವಾಭಾವಿಕ ಹೆರಿಗೆ ಆಗುತ್ತದೆ ಎಂದು ಸಮಯ ದೂಡಿದ ಕಾರಣ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ಶ್ವೇತಾರ ಕುಟುಂಬಸ್ಥರು ಆಸ್ಪತ್ರೆಯ ವೈದ್ಯಾಧಿಕಾರಿ ಎಲ್ಡೋಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳೀಯರು ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಪೊಲೀಸ್ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಕೂಡ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಒತ್ತಾಯಿಸಿದ್ದಾರೆ.
0 التعليقات: