ರಾಜ್ಯದಲ್ಲಿ 10 ಒಮೈಕ್ರಾನ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ರವಿವಾರ ಹೊಸದಾಗಿ 10 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 76ಕ್ಕೇರಿದೆ ಎಂದು ಆರೋಗ್ಯ ಸಚಿವ ಡಿ. ಸುಧಾಕರ್ ತಿಳಿಸಿದ್ದಾರೆ.
ಟ್ವೀಟ್ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಜ.2 ರಂದು ಕರ್ನಾಟಕದಲ್ಲಿ ಹತ್ತು ಹೊಸ ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 76ಕ್ಕೆ ತಲುಪಿದೆ' ಎಂದು ಹೇಳಿದ್ದಾರೆ.
ರವಿವಾರ ಬೆಂಗಳೂರಿನಲ್ಲಿ 8 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಐವರು ವಿದೇಶಿ ಪ್ರವಾಸ ಕೈಗೊಂಡಿದ್ದ ಹಿನ್ನೆಲೆ ಹೊಂದಿದ್ದಾರೆ. ಉಳಿದ ಎರಡು ಪ್ರಕರಣಗಳು ಧಾರವಾಡದಿಂದ ವರದಿಯಾಗಿದೆ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ರವಿವಾರ ಒಟ್ಟು 1187 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.
0 التعليقات: