Monday, 3 January 2022

ರಾಜ್ಯದಲ್ಲಿಂದು 1,290 ಮಂದಿಗೆ ಕೊರೋನ ದೃಢ, 5 ಮಂದಿ ಮೃತ್ಯು

ರಾಜ್ಯದಲ್ಲಿಂದು 1,290 ಮಂದಿಗೆ ಕೊರೋನ ದೃಢ, 5 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 1,290 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಐವರು ಸೋಂಕಿಗೆ ಬಲಿಯಾಗಿದ್ದು, 232 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 30,10,847ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,351ಕ್ಕೆ ತಲುಪಿದೆ.  

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 11,345ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಐವರು ಸಾವು: ಬೆಂಗಳೂರು ನಗರ 3, ಚಿತ್ರದುರ್ಗ 1, ಹಾಸನ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,290 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 11, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 1,041, ಬೀದರ್ 1, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 52, ದಾವಣಗೆರೆ 2, ಧಾರವಾಡ 19, ಗದಗ 1, ಹಾಸನ 11, ಕಲಬುರಗಿ 9, ಕೊಡಗು 10, ಕೋಲಾರ 6, ಕೊಪ್ಪಳ 1, ಮಂಡ್ಯ 13, ಮೈಸೂರು 14, ರಾಯಚೂರು 2, ಶಿವಮೊಗ್ಗ 13, ತುಮಕೂರು 6, ಉಡುಪಿ 43, ಉತ್ತರ ಕನ್ನಡ 2, ವಿಜಯಪುರ 5, ಯಾದಗಿರಿ  ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 1,041 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರದಂದು 1,041 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಮೂವರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,40,408 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,66,392 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,408 ಜನರು ಸೋಂಕಿಗೆ ಬಲಿಯಾಗಿದ್ದಾರೆ.  

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.  


SHARE THIS

Author:

0 التعليقات: