2 ಕೋಟಿಯ ದುಬಾರಿ ಗಡಿಯಾರ ಕಳವು ;
ಓರ್ವನ ಬಂಧನ
ಬೆಂಗಳೂರು, ಜ.12: ಇಲ್ಲಿನ ಇಂದಿರಾನಗರದಲ್ಲಿರುವ ಗಡಿಯಾರ ಅಂಗಡಿಗೆ ನುಗ್ಗಿ 2 ಕೋಟಿ ರೂಪಾಯಿ ಬೆಲೆಬಾಳುವ ಕೈ ಗಡಿಯಾರಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಮ್ಮನಪಾಳ್ಯದಲ್ಲಿ ನೆಲೆಸಿದ್ದ ಬಿಹಾರ ಮೂಲದ ಅಖ್ತರ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ನಾಲ್ಕು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
ಇಂದಿರಾನಗರದ ಮುಖ್ಯರಸ್ತೆಯ ಶಾಮೋಯಿಲ್ ಎಂಬುವರು ಹಲವು ವರ್ಷಗಳಿಂದ ಸಿಮನ್ಸ್ ಗಡಿಯಾರ ಮಳಿಗೆ ಆರಂಭಿಸಿ ದುಬಾರಿ ಬೆಲೆಯ ಗಡಿಯಾರಗಳನ್ನು ಮಾರಾಟ ಮಾಡುತ್ತಿದ್ದರು.
ಆದರೆ, ಜ.4 ರಂದು ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ವಿವಿಧ ಕಂಪೆನಿಯ 29, ಒಮೆಗಾದ 13 ಗಡಿಯಾರಗಳನ್ನು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
0 التعليقات: