Friday, 14 January 2022

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭ, ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ


 ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭ, ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

ಹೊಸದಿಲ್ಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31 ರಂದು ಉಭಯ ಸದನ ಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುವುದರೊಂದಿಗೆ ಆರಂಭವಾಗುತ್ತದೆ ಹಾಗೂ  ಎಪ್ರಿಲ್ 8 ರಂದು ಅಧಿವೇಶನ ಮುಕ್ತಾಯಗೊಳ್ಳುತ್ತದೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು NDTV ವರದಿ ಮಾಡಿದೆ.

ಅಧಿವೇಶನದ ಮೊದಲ ಭಾಗವು ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿದೆ.

ಒಂದು ತಿಂಗಳ ಅವಧಿಯ ವಿರಾಮದ ನಂತರ ಅಧಿವೇಶನದ ಎರಡನೇ ಭಾಗವು ಮಾರ್ಚ್ 14 ರಿಂದ ಆರಂಭವಾಗಿ ಎಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ.

ದೇಶದಲ್ಲಿ ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಬಜೆಟ್ ಅಧಿವೇಶನ ನಡೆಯುತ್ತಿದೆ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ತಿಂಗಳ ಮೊದಲ ವಾರದಲ್ಲಿ 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗಳು ಕೋವಿಡ್‌ ಸೋಂಕಿಗೆ ಒಳಗಾಗಿದ್ದಾರೆ.

ಮಂಗಳವಾರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದ ಕ್ರಮಗಳು ಮತ್ತು ಇತರ ಸಿದ್ಧತೆಗಳನ್ನು ಪರಿಶೀಲಿಸಲು ಸಂಸತ್ ಭವನದ ಸಂಕೀರ್ಣವನ್ನು (ಪಿಎಚ್ ಸಿ) ಪರಿಶೀಲಿಸಿದರು.


SHARE THIS

Author:

0 التعليقات: