Saturday, 29 January 2022

ಜ.31ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ರದ್ದು: ಸಚಿವ ಆರ್. ಅಶೋಕ್

 

ಜ.31ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ರದ್ದು: ಸಚಿವ ಆರ್. ಅಶೋಕ್

ಬೆಂಗಳೂರು: ರಾಜ್ಯಾದ್ಯಂತ ಜ.31ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ. ಅದೇರೀತಿ ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆಗಳು ಪುನಾರಂಭಗೊಳ್ಳಲಿದೆ ಎಂದು  ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕೋವಿಡ್‌-19ರ ಸ್ಥಿತಿಗತಿಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆಸಿ ನಂತರ ಕಂದಾಯ ಸಚಿವ ಆರ್. ಅಶೋಕ್‌  ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ದೇವಾಲಯ, ಮಸೀದಿ, ಚರ್ಚ್ ಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಅವಕಾಶ ಇರುತ್ತದೆ. ಆದರೆ ಏಕಕಾಲದಲ್ಲಿ 50 ಜನರಷ್ಟೇ ಸೇರಲು ಅವಕಾಶವಿರುತ್ತದೆ. ಚಿತ್ರಮಂದಿರಗಳಲ್ಲಿ ಶೇ.50ರ ನಿಯಮ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ ಜಾತ್ರೆಗಳು, ಧರಣಿ, ಪ್ರತಿಭಟನೆಗಳಿಗೆ ನಿರ್ಬಂಧ ಮುಂದುವರಿಯಲಿದೆ. ಕಚೇರಿಗಳಲ್ಲಿ 100 ಶೇ. ಸಿಬ್ಬಂದಿಯೊಂದಿಗೆ ಕಾರ್ಯಾಚರಿಸಲು ಅವಕಾಶ ಇರುತ್ತದೆ. ಸ್ವಿಮ್ಮಿಂಗ್ ಫುಲ್, ಜಿಮ್ ಗಳಲ್ಲಿ ಶೇ.50ರಷ್ಟು ಅವಕಾಶ ನೀಡಲಾಗಿದೆ. ಹೋಟೆಲ್, ಪಬ್‍, ರೆಸ್ಟೋರೆಂಟ್ ಗಳು ತೆರೆಯಲು ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು.

ತೆರೆದ ಪ್ರದೇಶದಲ್ಲಿ ನಡೆಯುವ ಮದುವೆ ಸಮಾರಂಭದಲ್ಲಿ 300 ಜನರು ಹಾಗೂ ಒಳಾಂಗಣದಲ್ಲಿ ನಡೆಯುವ ಮದುವೆಗಳಲ್ಲಿ 200 ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಅದೇರೀತಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ.2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ 19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದವರು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಎಲ್ಲಾ ತರಗತಿಗಳು ಪುನರಾರಂಭ: ಬಿ.ಸಿ.ನಾಗೇಶ್

ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳನ್ನು ಪುನರಾರಂಭಿಸಲು‌ ನಿರ್ಧರಿಸಲಾಗಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಲ್ಲ ತರಗತಿಗಳು ಸೋಮವಾರದಿಂದ ಕಾರ್ಯಾ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.


SHARE THIS

Author:

0 التعليقات: