Wednesday, 5 January 2022

ರಾಜ್ಯದಲ್ಲಿ ಬುಧವಾರ 4,246 ಕೊರೋನ ಪ್ರಕರಣ ದೃಢ, ಇಬ್ಬರು ಸೋಂಕಿಗೆ ಬಲಿ


 ರಾಜ್ಯದಲ್ಲಿ ಬುಧವಾರ 4,246 ಕೊರೋನ ಪ್ರಕರಣ ದೃಢ, ಇಬ್ಬರು ಸೋಂಕಿಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಬುಧವಾರ 4,246 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 362 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 30,17,572ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,357ಕ್ಕೆ ತಲುಪಿದೆ.        

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 17,414ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 4,246 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 6, ಬಳ್ಳಾರಿ 34, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 3,605, ಬೀದರ್ 3, ಚಾಮರಾಜನಗರ 2, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 12, ಚಿತ್ರದುರ್ಗ 6, ದಕ್ಷಿಣ ಕನ್ನಡ 111, ದಾವಣಗೆರೆ 3, ಧಾರವಾಡ 26, ಗದಗ 5, ಹಾಸನ 20, ಕಲಬುರಗಿ 28, ಕೊಡಗು 20, ಕೋಲಾರ 24, ಮಂಡ್ಯ 36, ಮೈಸೂರು 59, ರಾಮನಗರ 4, ಶಿವಮೊಗ್ಗ 22, ತುಮಕೂರು 43, ಉಡುಪಿ 88, ಉತ್ತರ ಕನ್ನಡ 17, ವಿಜಯಪುರ ಜಿಲ್ಲೆಯಲ್ಲಿ 14  ಪ್ರಕರಣ ಪತ್ತೆಯಾಗಿವೆ.  


SHARE THIS

Author:

0 التعليقات: