Saturday, 8 January 2022

ದ.ಕ.ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಆರೋಪ : 625 ಪ್ರಕರಣ ದಾಖಲು

ದ.ಕ.ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಆರೋಪ : 625 ಪ್ರಕರಣ ದಾಖಲು

ಮಂಗಳೂರು: ಕೋವಿಡ್ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂ ಉಲ್ಲಂಘಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲೆಯಲ್ಲಿ 625 ಪ್ರಕರಣಗಳು ದಾಖಲಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ನಿಯಮ ಹಾಗೂ ಮೋಟಾರು ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 517 ಪ್ರಕರಣ ದಾಖಲಾಗಿದೆ. ಮಾಸ್ಕ್ ಧರಿಸದ 369 ಪ್ರಕರಣವಲ್ಲದೆ 110ಕ್ಕೂ ಅಧಿಕ ವಾಹನಗಳನ್ನು ಮುಟ್ಟುಗೋಲು ಹಾಕಿ ಬಳಿಕ ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ. ಕಮಿಷನರೇಟ್ ವ್ಯಾಪ್ತಿಯ ಗಡಿ ಭಾಗದ 5 ಸಹಿತ ಒಟ್ಟು 32 ಕಡೆ ನಾಕಾಬಂಧಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ 108 ಪ್ರಕರಣ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಡಿ 10 ವಾಹನಗಳನ್ನು ಮುಟ್ಟುಗೊಲು ಹಾಕಲಾಗಿದೆ ಎಂದು ತಿಳಿಸಿದ್ದಾರೆ.


SHARE THIS

Author:

0 التعليقات: