Saturday, 15 January 2022

ವೀಕೆಂಡ್ ಕರ್ಫ್ಯೂ ಉಲ್ಲಂಘನೆ: ದ.ಕ. ಜಿಲ್ಲೆಯಲ್ಲಿ 642 ಪ್ರಕರಣ ದಾಖಲು


 ವೀಕೆಂಡ್ ಕರ್ಫ್ಯೂ ಉಲ್ಲಂಘನೆ: ದ.ಕ. ಜಿಲ್ಲೆಯಲ್ಲಿ 642 ಪ್ರಕರಣ ದಾಖಲು

ಮಂಗಳೂರು: ಕೋವಿಡ್ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲೆಯಲ್ಲಿ 642 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೋಟಾರು ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 642 ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಮದಡಿ ಮಾಸ್ಕ್ ಧರಿಸದವರ ವಿರುದ್ಧ 177 ಪ್ರಕರಣ ದಾಖಲಿಸಲಾಗಿದೆ. ಎರಡೂ ಘಟನೆಗಳಲ್ಲಿ ಒಟ್ಟು 2,54,550 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


SHARE THIS

Author:

0 التعليقات: