Thursday, 13 January 2022

ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಮೃತ್ಯು


ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಮೃತ್ಯು

ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ಎಳು ಮಂದಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಕಾರು ಡಿವೈಡರ್​​ಗೆ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 


SHARE THIS

Author:

0 التعليقات: