Saturday, 8 January 2022

ರಾಜ್ಯದಲ್ಲಿಂದು 8,906 ಮಂದಿಗೆ ಕೊರೋನ ದೃಢ, 4 ಮಂದಿ ಮೃತ್ಯು

ರಾಜ್ಯದಲ್ಲಿಂದು 8,906 ಮಂದಿಗೆ ಕೊರೋನ ದೃಢ, 4 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಶನಿವಾರ 8906 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 4 ಜನರು ಸೋಂಕಿಗೆ ಬಲಿಯಾಗಿದ್ದು, 508 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 30,39,958ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,366ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 38,507ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

4 ಸೋಂಕಿತರು ಬಲಿ: ಬೆಂಗಳೂರು ನಗರ 3, ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 8906ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 6, ಬಳ್ಳಾರಿ 43, ಬೆಳಗಾವಿ 70, ಬೆಂಗಳೂರು ಗ್ರಾಮಾಂತರ 111, ಬೆಂಗಳೂರು ನಗರ 7113, ಬೀದರ್ 13, ಚಾಮರಾಜನಗರ 10, ಚಿಕ್ಕಬಳ್ಳಾಪುರ 36, ಚಿಕ್ಕಮಗಳೂರು 22, ಚಿತ್ರದುರ್ಗ 15, ದಕ್ಷಿಣ ಕನ್ನಡ 295, ಧಾರವಾಡ 56, ಹಾಸನ 139, ಕಲಬುರಗಿ 58, ಕೊಡಗು 26, ಕೋಲಾರ 65, ಮಂಡ್ಯ 183, ಮೈಸೂರು 203, ರಾಯಚೂರು 4, ರಾಮನಗರ 28, ಶಿವಮೊಗ್ಗ 66, ತುಮಕೂರು 53, ಉಡುಪಿ 186, ಉತ್ತರ ಕನ್ನಡ 52, ವಿಜಯಪುರ ಜಿಲ್ಲೆಯಲ್ಲಿ 22 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 7113 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ  ಶನಿವಾರ 7113 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮೂರು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,90,299 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,420 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,41,721 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 


SHARE THIS

Author:

0 التعليقات: