ಬಿಜೆಪಿ ತ್ಯಜಿಸಿದ ಮನೋಹರ್ ಪಾರಿಕ್ಕರ್ ಪುತ್ರ ಉತ್ಪಲ್
ಪಣಜಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಬಳಿಕ ಮಾಜಿ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರ ಪುತ್ರ ಉತ್ಪಲ್ ಪಾರಿಕ್ಕರ್ ಶುಕ್ರವಾರ ಬಿಜೆಪಿಯನ್ನು ತ್ಯಜಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಗೋವಾ ಚುನಾವಣೆಗೆ ಗುರುವಾರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ, ಉತ್ಪಲ್ಗೆ ಪಣಜಿಯಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿತ್ತು.
ಮಾಜಿ ಕೇಂದ್ರ ಸಚಿವರಾದ ಮನೋಹರ್ ಪಾರಿಕ್ಕರ್ 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಉತ್ಪಲ್ ತಂದೆಯ ಕ್ಷೇತ್ರವನ್ನು ಪ್ರತಿನಿಧಿಸಲು ಬಯಸಿದ್ದರು.
0 التعليقات: