Saturday, 22 January 2022

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು ಶೇ70 ಪ್ರತಿಶತದಷ್ಟು ಇದ್ದ ಪೌಷ್ಟಿಕತೆ ಈಗ ಶೇ 97 ಪ್ರತಿಶತದಷ್ಟಾಗಿದೆ. ಇದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿ ಹಾಗೇ ಹಾಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್‌ರನ್ನೂ ಪ್ರಧಾನಿ ಶ್ಲಾಘಿಸಿದರು.

ಜಿಲ್ಲೆಯು ಅಪೌಷ್ಟಿಕತೆ ವಿಚಾರದಲ್ಲಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, 5 ವರ್ಷದ ಒಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಈಗಲೂ ಸಾವನ್ನಪ್ಪುತ್ತಿದ್ದಾರೆ. ಈ ಕುರಿತು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಿ, ಹಿಂದಿಗಿಂತಲೂ ಪೌಷ್ಟಿಕತೆ ವಿಚಾರದಲ್ಲಿ ಉತ್ತಮ ಕಾರ್ಯ ಮಾಡಿದೆ. ಮುಂಬರುವ ದಿನಗಳಲ್ಲಿ ಮಹತ್ವಾಕಾಂಶೆ ಯೋಜನೆಗಳ ಅಡಿಯಲ್ಲಿ ಉತ್ತಮ ಕೆಲಸ ಮಾಡುವಂತೆ ಪ್ರಧಾನಿ ಸೂಚನೆ ನೀಡಿದರು.SHARE THIS

Author:

0 التعليقات: