Saturday, 1 January 2022

ಮೂಡಿಗೆರೆ: ಟ್ರ್ಯಾಕ್ಟರ್ ಪಲ್ಟಿಯಾಗಿ ನವ ವಿವಾಹಿತ ಮೃತ್ಯು

ಮೂಡಿಗೆರೆ: ಟ್ರ್ಯಾಕ್ಟರ್ ಪಲ್ಟಿಯಾಗಿ ನವ ವಿವಾಹಿತ ಮೃತ್ಯು

ಚಿಕ್ಕಮಗಳೂರು, ಜ.2: ಟ್ರ್ಯಾಕ್ಟರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಅದರಡಿಯಲ್ಲಿ ಸಿಲುಕಿ ಚಾಲಕ ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಹಳೇ ಕೋಟೆ ಬಳಿ ಶನಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಆರ್.ಆರ್.ಎಸ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಹರೀಶ್ (28) ಎಂದು ಗುರುತಿಸಲಾಗಿದೆ. ಇವರು ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು.

ಕಳೆದ ರಾತ್ರಿ ಇಳಿಜಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿತ್ತೆನ್ನಲಾಗಿದೆ. ಈ ವೇಳೆ ಅದರ ಚಕ್ರದಡಿಗೆ ಸಿಲುಕಿದ ಹರೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHARE THIS

Author:

0 التعليقات: