Wednesday, 19 January 2022

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ ಪ್ರಶ್ನೆ


ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಜನರ ಜೀವನ, ಜೀವ ಎರಡೂ ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ‌. ಜೀವನ ಉಳಿಯಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆರವುಗೊಳಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು? ಈಗಾಗಲೇ ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಜಾಥಾಗಳನ್ನು ಮಾಡಲಾಗುತ್ತದೆ. ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತ ಜನರನ್ಮು ಸಂಕಷ್ಟಕ್ಕೀಡು ಮಾಡಬೇಕು ಎಂದು ಅವರು ತಮ್ಮದೇ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ ಜನ ಕರ್ಫ್ಯೂ ಲಾಕ್ ಡೌನ್ ನಿಂದ ನೊಂದಿದ್ದಾರೆ. ಹಾಗಾಗಿ ಲಾಕ್ ಡೌನ್ ಬೇಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ತವಾರ ಒಳ್ಳೆಯ ನಿರ್ಧಾತ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.


SHARE THIS

Author:

0 التعليقات: