ಕನಕಪುರ: ಕಾವೇರಿ ಸಂಗಮದಲ್ಲಿ ಮೇಕೆದಾಟು ಪಾದಯಾತ್ರೆ ಆರಂಭ
ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ 'ನೀರಿಗಾಗಿ ನಮ್ಮ ನಡಿಗೆ' ಪಾದಯಾತ್ರೆ ಇಂದು ಆರಂಭವಾಗಿದ್ದು, ಕನಕಪುರದ ಕಾವೇರಿ ಸಂಗಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ.
ಇಂದಿನಿಂದ ಜ.19ರವರೆಗೂ ನಡೆಯಲಿರುವ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ರಾಮನಗರ ತಾಲೂಕಿನ ಕನಕಪುರದ ಸಂಗಮದಿಂದ ಕನಕಪುರ, ರಾಮನಗರ, ಬಿಡದಿ ಹಾಗೂ ಕೆಂಗೇರಿ ಮಾರ್ಗವಾಗಿ ಬೆಂಗಳೂರಿನವರೆಗೂ ಸಾಗಲಿದೆ.
ವೇದಿಕೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಧ್ರುವ ನಾರಾಯಣ, ಈಶ್ವರ ಖಂಡ್ರೆ, ರಾಮಲಿಂಗ ರೆಡ್ಡಿ, ಸಲೀಂ ಅಹಮದ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ನಟ ಸಾಧುಕೋಕಿಲ ಇತರರಿದ್ದರು.
0 التعليقات: