Sunday, 2 January 2022

ಗುಂಡ್ಯ: ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ: ಚಾಲಕ ಸ್ಥಳದಲ್ಲೇ ಮೃತ್ಯು


 ಗುಂಡ್ಯ: ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ: ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆಯಲ್ಲಿ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಉಡುಪಿ ಮೂಲದ ಕುಟುಂಬವೊಂದು ಬೆಂಗಳೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರು ಅಡ್ಡಹೊಳೆ ಸಮೀಪ ತಲುಪಿದಾಗ ಕಾರಿನಲ್ಲಿ ಕರ್ಕಶ ಸದ್ದು ಕೇಳಿಸಿತೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆರೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರಬಿದ್ದು ಕಾರು ಹಾಗೂ ಚಾಲಕನ ಮೇಲೆಯೇ ಉರುಳಿಬಿತ್ತೆನ್ನಲಾಗಿದೆ.

ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.


SHARE THIS

Author:

0 التعليقات: