ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ..!
ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆ ಮತ್ತೆ ಭರ್ಜರಿ ಏರಿಕೆಯಾಗಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 52,960 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.
0 التعليقات: